2 ರಾಜರು 23

ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.

2 Kings 23:18 (UKJV) And he said, Let him alone; let no man move his bones. So they let his bones alone, with the bones of the prophet that came out of Samaria.

16ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.

17ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.

18ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.

19ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,

20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.

Kannada Bible (Old Version), Bible Society of India.