2 ರಾಜರು 23

ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.

2 Kings 23:2 (UKJV) And the king went up into the house of the LORD, and all the men of Judah and all the inhabitants of Jerusalem with him, and the priests, and the prophets, and all the people, both small and great: and he read in their ears all the words of the book of the covenant which was found in the house of the LORD.

1ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.

2ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.

3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.

4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.

Kannada Bible (Old Version), Bible Society of India.