2 ರಾಜರು 23

ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.

2 Kings 23:31 (UKJV) Jehoahaz was twenty and three years old when he began to reign; and he reigned three months in Jerusalem. And his mother's name was Hamutal, the daughter of Jeremiah of Libnah.

29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.

30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.

31ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.

32ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.

Kannada Bible (Old Version), Bible Society of India.