2 ರಾಜರು 3

ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.

2 Kings 3:1 (UKJV) Now Jehoram the son of Ahab began to reign over Israel in Samaria the eighteenth year of Jehoshaphat king of Judah, and reigned twelve years.

1ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.

2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.

3ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.

Kannada Bible (Old Version), Bible Society of India.