15ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
16ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ.
17ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
18ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.
19ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.