2 ರಾಜರು 5

ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.

2 Kings 5:10 (UKJV) And Elisha sent a messenger unto him, saying, Go and wash in Jordan seven times, and your flesh shall come again to you, and you shall be clean.

8ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.

9ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.

10ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.

11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.

12ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.

Kannada Bible (Old Version), Bible Society of India.