2 ರಾಜರು 5

ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.

2 Kings 5:11 (UKJV) But Naaman was angry, and went away, and said, Behold, I thought, He will surely come out to me, and stand, and call on the name of the LORD his God, and strike his hand over the place, and recover the leper.

9ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.

10ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.

11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.

12ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.

13ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.

Kannada Bible (Old Version), Bible Society of India.