2 ರಾಜರು 5

ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.

2 Kings 5:23 (UKJV) And Naaman said, Be content, take two talents. And he urged him, and bound two talents of silver in two bags, with two changes of garments, and laid them upon two of his servants; and they bare them before him.

21ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.

22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್‌ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.

23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.

24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.

25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.

Kannada Bible (Old Version), Bible Society of India.