22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?