2 ರಾಜರು 5

ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್‌ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?

2 Kings 5:26 (UKJV) And he said unto him, Went not mine heart with you, when the man turned again from his chariot to meet you? Is it a time to receive money, and to receive garments, and olive yards, and vineyards, and sheep, and oxen, and male servants, and maidservants?

24ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.

25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.

26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್‌ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?

27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.

Kannada Bible (Old Version), Bible Society of India.