6ಅರಸನು ಆ ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಆ ಕಾಲದ ವರೆಗೂ ಆ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು.
7ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
8ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.
9ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.
10ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.