27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
28ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
29ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.
30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
31ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.