2 ಸಾಮುವೇಲು 13

ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.

2 Samuel 13:16 (UKJV) And she said unto him, There is no cause: this evil in sending me away is greater than the other that you did unto me. But he would not hearken unto her.

14ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.

15ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.

16ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.

17ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.

18ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.

Kannada Bible (Old Version), Bible Society of India.