2 ಸಾಮುವೇಲು 15

ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.

2 Samuel 15:1 (UKJV) And it came to pass after this, that Absalom prepared him chariots and horses, and fifty men to run before him.

1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.

2ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.

3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.

Kannada Bible (Old Version), Bible Society of India.