2 ಸಾಮುವೇಲು 22

ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?

2 Samuel 22:32 (UKJV) For who is God, save the LORD? and who is a rock, save our God?

30ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.

31ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.

32ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?

33ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.

34ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.

Kannada Bible (Old Version), Bible Society of India.