42ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.
43ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
44ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
45ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
46ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.