1ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್‌ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
3ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.