1ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
2ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
4ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.