2 ತಿಮೋಥೇ 1

ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.

2 Timothy 1:3 (UKJV) I thank God, whom I serve from my forefathers with pure conscience, that without ceasing I have remembrance of you in my prayers night and day;

1ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು

2ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.

4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;

5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.

Kannada Bible (Old Version), Bible Society of India.