7ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
8ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
11ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.