2 ತಿಮೋಥೇ 4

ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.

2 Timothy 4:3 (UKJV) For the time will come when they will not endure sound doctrine; but after their own lusts shall they heap to themselves teachers, having itching ears;

1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.

4ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.

5ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.

Kannada Bible (Old Version), Bible Society of India.