23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.
25ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.