1ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
4ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.