ಅಪೋಸ್ತಲರು 2

ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.

Acts 2:42 (UKJV) And they continued steadfastly in the apostles' doctrine and fellowship, and in breaking of bread, and in prayers.

40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.

41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.

43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.

44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.

Kannada Bible (Old Version), Bible Society of India.