24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.
26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.