6ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
7ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.