40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
42ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.