18ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
19ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
20ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.