ಅಪೋಸ್ತಲರು 7

ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.

Acts 7:3 (UKJV) And said unto him, Get you out of your country, and from your kindred, and come into the land which I shall show you.

1ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.

2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--

3ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.

4ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.

5ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.

Kannada Bible (Old Version), Bible Society of India.