52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
56ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.