ಆಮೋಸ್ 1

ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.

Amos 1:15 (UKJV) And their king shall go into captivity, he and his princes together, says the LORD.

13ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.

14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.

15ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.

Kannada Bible (Old Version), Bible Society of India.