1ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
4ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.
5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.