11ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.
12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
13ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
14ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
15ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.