2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
3ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?
4ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
5ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ?
6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?