1ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
2ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
3ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
4ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
5ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.