24ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
25ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.
26ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
27ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
28ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.