39ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
41ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
42ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.
43ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.