ದಾನಿಯೇಲ್ 4

ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.

Daniel 4:1 (UKJV) Nebuchadnezzar the king, unto all people, nations, and languages, that dwell in all the earth; Peace be multiplied unto you.

1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.

2ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.

3ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.

Kannada Bible (Old Version), Bible Society of India.