13ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
14ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
15ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
16ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.
17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.