9ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.
10ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
11ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.
12ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?
13ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.