ದೇವರವಾಣಿಯಲ್ಲಿ 16

ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.

Deuteronomy 16:20 (UKJV) That which is altogether just shall you follow, that you may live, and inherit the land which the LORD your God gives you.

18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.

20ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.

21ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.

22ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.

Kannada Bible (Old Version), Bible Society of India.