19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
22ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
23ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.