58ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
60ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.
61ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.
62ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.