ದೇವರವಾಣಿಯಲ್ಲಿ 3

ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.

Deuteronomy 3:2 (UKJV) And the LORD said unto me, Fear him not: for I will deliver him, and all his people, and his land, into your hand; and you shall do unto him as you did unto Sihon king of the Amorites, which dwelt at Heshbon.

1ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.

2ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.

3ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.

4ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.

Kannada Bible (Old Version), Bible Society of India.