ದೇವರವಾಣಿಯಲ್ಲಿ 30

ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ

Deuteronomy 30:1 (UKJV) And it shall come to pass, when all these things are come upon you, the blessing and the curse, which I have set before you, and you shall call them to mind among all the nations, where the LORD your God has driven you,

1ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ

2ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ

3ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.

Kannada Bible (Old Version), Bible Society of India.