ದೇವರವಾಣಿಯಲ್ಲಿ 32

ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.

Deuteronomy 32:2 (UKJV) My doctrine shall drop as the rain, my speech shall distil as the dew, as the small rain upon the tender herb, and as the showers upon the grass:

1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.

2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.

3ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.

4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.

Kannada Bible (Old Version), Bible Society of India.