ದೇವರವಾಣಿಯಲ್ಲಿ 4

ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.

Deuteronomy 4:22 (UKJV) But I must die in this land, I must not go over Jordan: but all of you shall go over, and possess that good land.

20ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.

21ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.

22ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.

23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.

24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.

Kannada Bible (Old Version), Bible Society of India.