ದೇವರವಾಣಿಯಲ್ಲಿ 4

ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?

Deuteronomy 4:3 (UKJV) Your eyes have seen what the LORD did because of Baalpeor: for all the men that followed Baalpeor, the LORD your God has destroyed them from among you.

1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.

2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.

3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?

4ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.

5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.

Kannada Bible (Old Version), Bible Society of India.