ದೇವರವಾಣಿಯಲ್ಲಿ 5

ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.

Deuteronomy 5:21 (UKJV) Neither shall you desire your neighbour's wife, neither shall you covet your neighbour's house, his field, or his manservant, or his maidservant, his ox, or his ass, or any thing that is your neighbour's.

19ಕದಿಯಬೇಡ.

20ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.

21ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.

22ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.

23(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)

Kannada Bible (Old Version), Bible Society of India.