31ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
32ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.
33ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.